ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆಯ ಅರ್ಜಿ ಆಹ್ವಾನದ ವಿಡಿಯೋ.

แชร์
ฝัง
  • เผยแพร่เมื่อ 14 ธ.ค. 2021
  • ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆಯ ಅರ್ಜಿ ಆಹ್ವಾನದ ವಿಡಿಯೋ.
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-01-2022
    kacdc.karnatak...
    ಈ ಯೋಜನೆಯಲ್ಲಿ ಆರ್ಯ ವೈಶ್ಯ ಸಮುದಾಯದವರಿಗೆ ಸೇರಿದ ಅರ್ಜಿದಾರರು ಸ್ವಯಂ ಉದ್ಯೋಗ ಕೈಗೊಳ್ಳಲು ಸಾಂಪ್ರದಾಯಿಕ ವೃತ್ತಿಗಳಲ್ಲದೆ ಇತರೆ ವೃತ್ತಿಗಳಾದ ಹಸು ಸಾಕಾಣಿಕೆ, ವ್ಯಾಪಾರ ಚಟುವಟಿಕೆಗಳು ಸೇವಾ ಚಟುವಟಿಕೆಗಳು, ಕೈಗಾರಿಕೆ ಚಟುವಟಿಕೆಗಳು, ಇತ್ಯಾದಿ ಚಟುವಟಿಕೆಗಳನ್ನು ಕೈಗೊಳ್ಳಲು ನಿಗಮದ ಈ ಯೋಜನೆಯಲ್ಲಿ ಗರಿಷ್ಠ ರೂ.1,00,000/-ಗಳ ಆರ್ಥಿಕ ನೆರವು ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.20ರಷ್ಟು ಗರಿಷ್ಠ ರೂ.20,000/-ಗಳ ಸಹಾಯಧನ ಹಾಗೂ ಉಳಿಕೆ ಮೊತ್ತವಾದ ಶೇ.80 ರಷ್ಟು ಗರಿಷ್ಠ ರೂ.80,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಮಂಜೂರು ಮಾಡುವುದು.
    ಈ ಯೋಜನೆ ಅಡಿಯಲ್ಲಿ ಘಟಕ ವೆಚ್ಚವು ಕನಿಷ್ಠ ರೂ.50,000/- ಗಳಾಗಿರಬೇಕು ಹಾಗೂ ಈ ಮೊತ್ತಕ್ಕೆ ಸಹಾಯಧನವು ಕನಿಷ್ಠ ಶೇ.20ರಷ್ಟು ಅಂದರೆ ರೂ.10,000/- ಗಳು, ಬಾಕಿ ಮೊತ್ತಕ್ಕೆ ಶೇ.4ರ ಬಡ್ಡಿ ದರದಲ್ಲಿ ಮಂಜೂರು ಮಾಡುವುದು.
    1. ಅರ್ಹತೆ: ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. (ನಮೂನೆ-ಜಿ ನಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು)
    2. ಆದಾಯ ಮಿತಿ: ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ
    ಪ್ರದೇಶದವರಿಗೆ ರೂ.3,00,000/-ಗಳ ಮಿತಿ ಒಳಗಿರಬೇಕು.
    3. ವಯೋಮಿತಿ: ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದೊಳಗಿನವರಾಗಿರಬೇಕು.
    4. ವಿಳಾಸ: ಅರ್ಜಿದಾರರು ಕರ್ನಾಟಕದ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.
    5. ಮಹಿಳೆಯರ ಮೀಸಲಾತಿ: ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಶೇ.33 ರಷ್ಟು ಮಹಿಳಾ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಈ ಮೀಸಲಾತಿಯಲ್ಲಿ ಶೇ.50 ರಷ್ಟು ವಿಧವೆಯರು ಮತ್ತು ವಿಚ್ಛೆದನೆಯಾಗಿರುವ ಮಹಿಳಾ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು.
    6. ವಿಶೇಷಚೇತನರ (ಅಂಗವಿಕಲರ) ಮೀಸಲಾತಿ: ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಶೇ.5 ರಷ್ಟು ವಿಶೇಷಚೇತನ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು.
    7. ಒಂದು ಕುಟುಂಬದಲ್ಲಿ ಒಂದು ಫಲಾನುಭವಿಯನ್ನು ಮಾತ್ರ ಆಯ್ಕೆ ಮಾಡಬೇಕು.
    8. ಆಯ್ಕೆ ವಿಧಾನ: ಈ ಯೋಜನೆಯಲ್ಲಿ ಅರ್ಹ ಫಲಾನುಭವಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುವುದು.
    9. ಸಾಲದ ಮರುಪಾವತಿ ಅವಧಿ: ಈ ಯೋಜನೆ ಅಡಿಯಲ್ಲಿ ಪಡೆದ ಸಾಲವನ್ನು 3 ವರ್ಷಗಳ ಅವಧಿಯಲ್ಲಿ 34 ಮಾಸಿಕ ಕಂತುಗಳಲ್ಲಿ ಅಸಲು ಮತ್ತು ಬಡ್ಡಿ ಸೇರಿಸಿ ಮರುಪಾವತಿಸಬೇಕು 2 ತಿಂಗಳ ವಿರಾಮ ಅವಧಿ ಇರುತ್ತದೆ.
    10. ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು.

ความคิดเห็น •