ಮರುಳು ಮಾಡಿಕೊಂಡೆಯಲ್ಲೇ ಮಾಯಾದೇವಿಯೇ ।।ಪ।। ಇರುಳು ಹಗಲು ಏಕವಾಗಿ ಹರಿಯು ನಿನ್ನ ಬಿಡದಿಪ್ಪಂತೆ ।।ಅ.ಪ।। ಪ್ರಳಯ ಕಾಲದಲ್ಲಿ ಆಲದೆಲೆಯ ಮೇಲೆ ಮಲಗಿದ್ದಾಗ ಹಲವು ಆಭರಣಗಳು ಜಲವು ಆಗಿ ಜಾಣತನದಿ ।।೧।। ಸರ್ವಸಂಗ ಬಿಟ್ಟು ಸನ್ಯಾಸಿಯಾದ ಕಾಲಕ್ಕೂ ಸರ್ವದಾ ತನ್ನೆದೆಯ ಮೇಲೆ ಬಿಡದೆ ನಿನ್ನ ಧರಿಸಿಪ್ಪಂತೆ ।।೨।। ಎಡಕೆ ಭೂಮಿ ಬಲಕೆ ಶ್ರೀಯು ಎದುರಿನಲ್ಲಿ ದುರ್ಗಾದೇವಿ ತೊಡೆಯ ಮೇಲೆ ಲಕುಮಿಯಾಗಿ ಬಿಡದೆ ಮುದ್ದಾಡಿಪ್ಪಂತೆ ।।೩।। ಮಕ್ಕಳ ಪಡೆದರೆ ನಿನ್ನ ಚೊಕ್ಕತನವು ಪೋಪುದೆಂದು ಪೊಕ್ಕುಳೊಳು ಮಕ್ಕಳ ಪಡೆದು ಕಕ್ಕುಲಾತಿ ಪಡುವಂತೆ ।।೪।। ಎಂದೆಂದಿಗೂ ಮರೆಯೆ ನಿನ್ನ ಆನಂದದಿ ಜನರಿಗೆಲ್ಲ ತಂದು ತೋರೆ ಸ್ವಾಧೀನ ಪುರಂದರ ವಿಠ್ಠಲ ರಾಯನ ।।೫।।
Very nice
Super voice madam
Vow what a voice and rendering. Excellent. May Sri Hari Vayu Guru bless you with all.
Voice chanda Ide.
Super
Chennagide but ennu training beku landing sari reach agtilla
ಮರುಳು ಮಾಡಿಕೊಂಡೆಯಲ್ಲೇ ಮಾಯಾದೇವಿಯೇ ।।ಪ।।
ಇರುಳು ಹಗಲು ಏಕವಾಗಿ ಹರಿಯು ನಿನ್ನ ಬಿಡದಿಪ್ಪಂತೆ ।।ಅ.ಪ।।
ಪ್ರಳಯ ಕಾಲದಲ್ಲಿ ಆಲದೆಲೆಯ ಮೇಲೆ ಮಲಗಿದ್ದಾಗ
ಹಲವು ಆಭರಣಗಳು ಜಲವು ಆಗಿ ಜಾಣತನದಿ ।।೧।।
ಸರ್ವಸಂಗ ಬಿಟ್ಟು ಸನ್ಯಾಸಿಯಾದ ಕಾಲಕ್ಕೂ
ಸರ್ವದಾ ತನ್ನೆದೆಯ ಮೇಲೆ ಬಿಡದೆ ನಿನ್ನ ಧರಿಸಿಪ್ಪಂತೆ ।।೨।।
ಎಡಕೆ ಭೂಮಿ ಬಲಕೆ ಶ್ರೀಯು ಎದುರಿನಲ್ಲಿ ದುರ್ಗಾದೇವಿ
ತೊಡೆಯ ಮೇಲೆ ಲಕುಮಿಯಾಗಿ ಬಿಡದೆ ಮುದ್ದಾಡಿಪ್ಪಂತೆ ।।೩।।
ಮಕ್ಕಳ ಪಡೆದರೆ ನಿನ್ನ ಚೊಕ್ಕತನವು ಪೋಪುದೆಂದು
ಪೊಕ್ಕುಳೊಳು ಮಕ್ಕಳ ಪಡೆದು ಕಕ್ಕುಲಾತಿ ಪಡುವಂತೆ ।।೪।।
ಎಂದೆಂದಿಗೂ ಮರೆಯೆ ನಿನ್ನ ಆನಂದದಿ ಜನರಿಗೆಲ್ಲ
ತಂದು ತೋರೆ ಸ್ವಾಧೀನ ಪುರಂದರ ವಿಠ್ಠಲ ರಾಯನ ।।೫।।
Svaati u try try again, dont live singing god bless u
Sulabha ella edu hadlik easy ede anstade aste
Nice Voice👌
God Bless you... keep up the good work .. practice well...practice well...practice well...
Very nice 👌